ಹೊಂಬೆಳಕ ಕಿರಣದಿ ಕಂಡಳು ಅವಳು
ಮುಂಜಾನೆಯಲ್ಲೂ ನಶೆ ಏರಿಸಿದಳು ನನ್ನೊಳು
ತುಂತುರು ಮಳೆಯ ಮನದಿ ತಂದಳು
ಹುದುಗಿದ್ದ ಆಸೆಗಳ ಚಿಗುರಿಸಿ ನಿಂತಳು
ಗುಡುಗಿನ ಆರ್ಭಟವಿಲ್ಲ, ಸಿಡಿಲಿನ ಸದ್ದಿಲ್ಲ
ಅವಳ ಮಿಂಚಿನ ನೋಟವೊಂದೆ ಕೋರೈಸುತ್ತಿತ್ತು
ನೀಳ ಕೇಶಕ್ಕೆ ಕಿರೀಟದಂತೆ ಮುಂಗುರುಳು ಸುರಳಿ ಸುತ್ತಿತ್ತು
ರವಿಯ ಕಿರಣ ಕೆನ್ನೆಯ ರಂಗ ಹೆಚ್ಚಿಸಿತ್ತು
ಕುಡಿನೋಟವ ಬೀರಿದೆ ಅವಳೆಡೆ
ಅವಳೆತ್ತಲೋ ನೋಡುತ್ತಿದ್ದಳು.
ಸ್ಪಂದಿಸದ ಸುಂದರ ನಯನೆಯ ಮನದಲಿ ಶಪಿಸುತ್ತಾ ನಡೆದೆ.
ಯಾರೋ ಬಿದ್ದ ಶಬ್ದ ಆಲಿಸಿ ತಿರುಗಿ ನೋಡಿದೆ
ಕುಸಿದು ಕೂತಿದ್ದಳು ಅವಳಲ್ಲಿ
ಕಲುಕಿತು ಮನ
ಶಪಿಸಿದೆ ಸೃಷ್ಟಿಕರ್ತನಾ
ಎಲ್ಲಾ ಕೊಟ್ಟು ಕಣ್ಣುಕಿತ್ತೆಯಲ್ಲೊ ಎಂದು ಬೈಯುತ್ತಾ...
ಸಾಗಿದೆ ಅವಳೆಡೆಗೆ
ಕಾಂತಿ ಇರದ ನಯನಗಳ ನೋಡುತ್ತ..
2 comments:
ಮಲೆನಾಡಿನ ಮಗಳು ಅಂತೀರಾ...ಮತ್ತೆ ಇದೆಂಥದು ಹುಡುಗಿಯ ಬಗ್ಗೆ ಕವಿತೆ ಬರ್ದಿದ್ದೀರಿ?? ನಿಮ್ಮ ಹುಡುಗನ ಬಗ್ಗೆ ಬರೀರಿ. ಓದ್ತೇವೆ.
ಭಾಗವತರೇ, ನಿಮ್ಮ ಅಭಿಪ್ರಾಯಕ್ಕೆ ಧನ್ಯವಾದಗಳು
ಇದು ನನಗಾಗಿ ಬರೆದ ಕವನದ ಸಾಲಲ್ಲ. ಗೆಳೆಯನೊಬ್ಬನ ಅನುಭವವ ಪದಗಳಲ್ಲಿ ಹಿಡಿದಿಡುವ ಪ್ರಯತ್ನ ಅಷ್ಟೆ.
Post a Comment